ಉಡುಪಿ: ಜಿಲ್ಲಾಡಳಿತ ಉಡುಪಿ ಇವರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆಗಸ್ಟ್ 25 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನವನ್ನು ಶಾಸಕ ಕೆ.ರಘುಪತಿ ಭಟ್ ಹಾಗೂ ವೆಬ್ಸೈಟ್ನ್ನು ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಸೋಮವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಕೆ.ರಘುಪತಿ ಭಟ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಎಎಸ್ಪಿ ಎಸ್.ಟಿ ಸಿದ್ಧಲಿಂಗಪ್ಪ, ಕುಂದಾಪುರ ಸಹಾಯಕ ಕಮೀಷನರ್ ರಾಜು ಕೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.












