ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಕುಂದಾಪುರ: ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಓಪನ್- 3ನೇ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿ -2022 ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅದ್ವಿತ್ ಎ.ಎಲ್., ಕುಮಿಟೆ ವಿಭಾಗದಲ್ಲಿ ಪ್ರತಿನಿಧಿಸಿ ಚಿನ್ನದ ಪದಕವನ್ನು ಹಾಗೂ ಕಟಾದಲ್ಲಿ ಕಂಚಿನ ಪದಕವನ್ನು , ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಪಿ. ರಾವ್ ಕಟಾದಲ್ಲಿ ಚಿನ್ನದ ಪದಕವನ್ನು ಹಾಗೂ ಕುಮಿಟೆ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆಯುವುದರ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಧನೆ ಮೆರೆದ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.