ಬ್ರಹ್ಮಾವರ: ಉಡುಪಿಯನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭವು ಆಗಸ್ಟ್ 28 ಭಾನುವಾರದಂದು ಬೆಳಿಗ್ಗೆ 10.00 ಗಂಟೆಗೆ ಬ್ರಹ್ಮಾವರದ ಮದರ್ ಪ್ಯಾಲೇಸ್ ಹತ್ತಿರವಿರುವ ಎಸ್.ಎಂ.ಎಸ್ ಚರ್ಚ್ ಕಾಂಪ್ಲೆಕ್ಸ್ ನ 2 ನೇ ಮಹಡಿಯಲ್ಲಿ ಜರುಗಲಿರುವುದು.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ದ್ವೀಪ ಪ್ರಜ್ವಲನೆ ಮಾಡಲಿದ್ದು, ಶಾಸಕ ರಘುಪತಿ ಭಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಮಹಾಲಕ್ಷ್ಮೀ ಕೋ-ಆಪ್ ಬ್ಯಾಂಕ್ ನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ ಎಂದು ಉಡುಪಿಯನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಚಿನ್ ಪೂಜಾರಿ ತಿಳಿಸಿದ್ದಾರೆ.