ಉಡುಪಿ: ಸೇವಾ ನಿವೃತ್ತಿ ಹೊಂದಿದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಪರ ನಿರ್ದೇಶಕ ಮತ್ತು ಟೆಕ್ಸೋಕ್ ಕರ್ನಾಟಕ ಸರ್ಕಾರ ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಮಾನಂದ ನಾಯಕ್ ರವರಿಗೆ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ಉಡುಪಿ ಶಾಖೆಯ ಮಾಜಿ ಅಧ್ಯಕ್ಷ ಸಿಎ ನರಸಿಂಹ ನಾಯಕ್ ರವರು ಇತ್ತೀಚೆಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.
ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ನಾಯಕ್ ಮತ್ತು ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.