ಉಡುಪಿ:ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅವಿಭಜಿತ ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 3 ರಂದು ಬೆಳಗ್ಗೆ 9.30 ಕ್ಕೆ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯಾ ಹಾಗೂ ಮತ್ತಿತರರು ಉಪಸ್ಥಿತರಿರಲಿದ್ದಾರೆ.