ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ದೇಶದಾದ್ಯಂತ ಎಸ್ಬಿಐ ಬ್ಯಾಂಕ್ನ ಎಂಟು ಸಾವಿರ ಗುಮಾಸ್ತರ ಹುದ್ದೆಗಳಿಗೆ ಮತ್ತು ಮುಂಬರುವ ವಿವಿಧ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಆಯೋಜಿಸಿದೆ. ಈ ಸಂಬಂಧ ತರಬೇತಿಯನ್ನು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದಲ್ಲಿ ತರಬೇತಿ ನೀಡಲಾಗುವುದು.
ಆಸಕ್ತರು ಮೇ 28 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತ ಗಂಗೋತ್ರಿ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಛೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0821-2515944 ಅನ್ನು ಸಂಪರ್ಕಿಸುವಂತೆ ಕರಾಮುವಿ ಉಡುಪಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಾ|| ಕೆ.ಪಿ ಮಹಾಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















