ಹೆಬ್ರಿ : ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಣ, ಸಾಹಿತ್ಯ, ಸಂಘಟನೆ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಪರಿಗಣಿಸಿ ಕೊಡಮಾಡುವ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022 ಈ ಬಾರಿ ಮುದ್ರಾಡಿ ಪ್ರೌಢ ಶಾಲೆಯ ಆಂಗ್ಲಭಾಷಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಅವರಿಗೆ ಲಭಿಸಿದೆ.
ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಸೆ.5 ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಡೆದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.