ಉಡುಪಿ:ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ 5 ಹಿರಿಯ ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ 2022 ನೀಡಿ ಗೌರವಿಸಲಾಯಿತು.
ಸೆಪ್ಟೆಂಬರ್ 5 ರಂದು ಉಡುಪಿಯ ಮಲಬಾರ್ ಅಂಡ್ ಗೋಲ್ಡ್ ಡೈಮಂಡ್ಸ್ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಕ್ಷ್ಮೀನಾರಾಯಣ ಭಟ್ (ಶಿಕ್ಷಣ ಹಾಗೂ ರಂಗಭೂಮಿ) , ರಾಜೇಂದ್ರ ಭಟ್ ಕೆ (ಶಿಕ್ಷಣ ಹಾಗೂ ನಿರೂಪಣೆ ) , ಪ್ರೊ. ನಾರಾಯಣ ಎಂ. ಹೆಗಡೆ (ಶಿಕ್ಷಣ ಹಾಗೂ ಸಂಘಟನೆ), ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ( ಶಿಕ್ಷಣ ಹಾಗೂ ಅರ್ಥಶಾಸ್ತ್ರ) , ಡಾ. ರೇಖಾ ವಿ. ಬನ್ನಾಡಿ (ಶಿಕ್ಷಣ ಹಾಗೂ ಸಾಹಿತ್ಯ ) ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಗಾಗಿ ಈ ಪುರಸ್ಕಾರ ನೀಡಲಾಯಿತು.
ಸಭಾಧ್ಯಕ್ಷತೆಯನ್ನು ವಹಿಸಿದ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ . ಎಂ. ಎಲ್ ಸಾಮಗ ಮಾತನಾಡಿ, ಶಿಕ್ಷಕರ ಸೇವೆ ಬಹುದೊಡ್ಡ ಸೇವೆ, ಸಮಾಜದಲ್ಲಿ ಅವರನ್ನು ಗುರುತಿಸಿ ಗೌರವಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತು ಹಾಗೂ ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ಉಡುಪಿ ಶ್ಲಾಘನೀಯ ಕೆಲಸ ಮಾಡಿದೆ ಎಂದರು.
ಸಮಾರಂಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ ಸಂಸ್ಥೆಯ ವ್ಯವಸ್ಥಾಪಕ ಹಫೀಝ್ ರೆಹಮಾನ್ , ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಉಪಸ್ಥಿತರಿದ್ದರು.
ಹಾಸ್ಯ ಭಾಷಣಕಾರ್ತಿ ಸಂಧ್ಯಾ ಶೆಣೈ ಸ್ವಾಗತಿಸಿದರು. ಶ್ರೀನಿವಾಸ್ ಉಪಾಧ್ಯ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.