ಕೂಸಮ್ಮ ಶಂಭು ಶೆಟ್ಟಿ ಆಸ್ಪತ್ರೆಯಲ್ಲಿ ಖಾಲಿ ಹುದ್ದೆ: ನೇರ ಸಂದರ್ಶನ

ಉಡುಪಿ: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಮಕ್ಕಳ ತಜ್ಞ, ಅರಿವಳಿಕೆ ಹಾಗೂ ಸೋನೊಲಾಜಿಸ್ಟ್ ತಲಾ 1 ಹುದ್ದೆ ಹಾಗೂ ವೈದ್ಯಾಧಿಕಾರಿಗಳ 3 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಸೆಪ್ಟಂಬರ್ 15 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.