ಆತ್ಮಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಪತ್ರಕರ್ತರ ಪಾತ್ರ ಕುರಿತು ಒಂದು ದಿನದ ಕಾರ್ಯಾಗಾರ

ಉಡುಪಿ: ಭಾರತೀಯ ಮನೋವೈದ್ಯರ ಸಂಘ ಕರ್ನಾಟಕ ಶಾಖೆ, ಉಡುಪಿ ಹಾಗೂ ಮಂಗಳೂರು ಮನೋವೈದ್ಯರ ಸಂಘ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ಆತ್ಮಹತ್ಯೆಯನ್ನು ಅರ್ಥೈಸುವಿಕೆ, ಆತ್ಮಹತ್ಯಾ ವರದಿಗಾರಿಕೆ ಮತ್ತು ಆತ್ಮಹತ್ಯೆಯನ್ನು ತಡೆಗಟ್ಟುವಲ್ಲಿ ಪತ್ರಕರ್ತರ ಪಾತ್ರದ ಕುರಿತು ಒಂದು ದಿನದ ಕಾರ್ಯಾಗಾರವು ಸೆ.9 ರಂದು ನಗರದ ಐ.ಎಮ್.ಎ ಭವನದಲ್ಲಿ ಜರುಗಿತು.

ಭಾರತೀಯ ಭಾರತೀಯ ಮನೋವೈದ್ಯರ ಸಂಘದ ಅಧ್ಯಕ್ಷ ಡಾ.ಪಿ.ಕೆ ಕಿರಣ್ ಕುಮಾರ್ ಮುಖ್ಯ ಅಥಿತಿಯಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.

 

 

ಆತ್ಮಹತ್ಯೆಗೆ ಕಾರಣವಾಗುವ ಮಾನಸಿಕ ಅಂಶಗಳ ಬಗ್ಗೆ ಡಾ.ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ನಿರ್ದೇಶಕ, ಮನೋವೈದ್ಯ ಡಾ. ಪಿ.ವಿ ಭಂಡಾರಿ ಅವರು ಉಪನ್ಯಾಸ ನೀಡಿದರು.

ವ್ಯಕ್ತಿಯ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳು ಆತ್ಯಹತ್ಯೆಗೆ ಹೇಗೆ ಕಾರಣವಾಗುತ್ತವೆ ಎನ್ನುವುದನ್ನು ಹಿರಿಯ ಪತ್ರಕರ್ತ ರಾಜಾರಾಮ್ ತಲ್ಲೂರು ವಿವರಿಸಿದರು.

ಡಾ.ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಮನೋವೈದ್ಯ ಡಾ.ದೀಪಕ್ ಮಲ್ಯ, ಮಾಧ್ಯಮಗಳು ಆತ್ಮಹತ್ಯೆಯ ಸುದ್ದಿಗಳನ್ನು ವಸ್ತು ನಿಷ್ಠವಾಗಿ ವರದಿ ಮಾಡುವ ಅಗತ್ಯತೆಯ ಕುರಿತು ಉಪನ್ಯಾಸ ನೀಡಿದರು.

ಉಪನ್ಯಾಸದ ಕೊನೆಯಲ್ಲಿ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಉಡುಪಿ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.