ಭಾರತೀಯ ಆಹಾರ ನಿಗಮದಲ್ಲಿ ನಾನ್ ಎಕ್ಸಿಕ್ಯುಟಿವ್ ಹುದ್ದೆ ಖಾಲಿ

ಉಡುಪಿ: ರಾಷ್ಟ್ರದ ಆಹಾರ ಭದ್ರತೆಯನ್ನು ಖಾತ್ರಿಪಡಿಸುವ ಅತಿದೊಡ್ಡ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಒಂದಾದ ಭಾರತೀಯ ಆಹಾರ ನಿಗಮ (ಎಫ್‌ಸಿ.ಐ) ದಲ್ಲಿ ವಲಯವಾರು ಖಾಲಿ ಇರುವ ನಾನ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://fci.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.