ಉಡುಪಿ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ಪ್ರಯುಕ್ತ ಸೇವಾ ಪಾಕ್ಷಿಕ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲಇವರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಸೆಪ್ಟಂಬರ್ 18 ಆದಿತ್ಯವಾರದಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರವರೆಗೆ ಕೆಎಂಸಿ ಮಣಿಪಾಲದ ರಕ್ತನಿಧಿ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮವಿದ್ದು ಹೆಚ್ಚಿನ ಮಾಹಿತಿಗಾಗಿ ವೀಣಾ ಎಸ್. ಶೆಟ್ಟಿ 9901037557, ರಶ್ಮಿತಾ ಬಿ. ಶೆಟ್ಟಿ 9110831417, ಪ್ರಮೀಳಾ ಹರೀಶ್ 7259950372,ರಕ್ತದ ಆಪತ್ಭಾಂದವ ಸತೀಶ್ ಸಾಲ್ಯಾನ್ ಮಣಿಪಾಲ್ 9986668476 ಇವರನ್ನು ಸಂಪರ್ಕಿಸಲು ಕೋರಲಾಗಿದೆ.