ಮಣಿಪಾಲ: ಭಾರತದ ಶಿಕ್ಷಣ ಸಚಿವಾಲಯದ ತಾಂತ್ರಿಕ ಶಿಕ್ಷಕರ ವಿಭಾಗದಲ್ಲಿ ನೀಡುವ ರಾಷ್ಟ್ರೀಯ ಪ್ರಶಸ್ತಿಯು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಾರ್ತಾ ಮತ್ತು ಸಂವಹನ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಮನೋಹರ ಪೈ ಎಂ.ಎಂ, ಇವರಿಗೆ ಲಭಿಸಿದೆ.
ಸೆಪ್ಟೆಂಬರ್ 6 ರಂದು ದೆಹಲಿಯ ಡಾ.ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ .ಮನೋಹರ ಪೈ ಅವರಿಗೆ ಪ್ರಶಸ್ತಿ ನೀಡಲಾಯಿತು.
ಭಾರತ ಸರ್ಕಾರದ ಶಿಕ್ಷಣ ರಾಜ್ಯ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ, ರಾಜ್ಕುಮಾರ್ ರಂಜನ್ ಸಿಂಗ್, ಡಾ. ಸುಭಾಷ್ ಸರ್ಕಾರ್ ಉಪಸ್ಥಿತರಿದ್ದರು.
ಪ್ರಶಸ್ತಿಯು ನಗದು ಬಹುಮಾನ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ.