ಉಡುಪಿ: ಉಡುಪಿ ತಾಲೂಕಿನ ಗುಂಡಿಬೈಲು ನ್ಯಾಯಬೆಲೆ ಅಂಗಡಿ ಮಾಲಿಕ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಸದ್ರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆ ಸ್ಥಗಿತಗೊಳಿಸಲಾಗಿರುತ್ತದೆ.
ಪ್ರಸ್ತುತ ಪೋರ್ಟೆಬಿಲಿಟಿ ಮೂಲಕ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆದುಕೊಳ್ಳಲು ಅವಕಾಶವಿರುವುದರಿಂದ ಗುಂಡಿಬೈಲು ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಪಡಿತರದಾರರು ಅಂಬಾಗಿಲು ಹೆರ್ಗ ಸಿ.ಎ ಬ್ಯಾಂಕ್, ಪೆರಂಪಳ್ಳಿ ಹೆರ್ಗ ಸಿ.ಎ ಬ್ಯಾಂಕ್, ಆದಿ ಉಡುಪಿ ಲ್ಯಾಂಪ್ ಸೊಸೈಟಿ ಅಥವಾ ಇತರೆ ನ್ಯಾಯಬೆಲೆ ಅಂಗಡಿಗಳಲ್ಲಿ ಮುಂದಿನ ಆದೇಶದವರೆಗೆ ಪಡಿತರ ಪಡೆದುಕೊಳ್ಳಬಹುದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












