ಉಡುಪಿ: ಮಲ್ಪೆ ಕರಾವಳಿ ಕಾವಲು ಪೊಲೀಸ್ ಇವರ ವತಿಯಿಂದ ಭಾನುವಾರದಂದು ಮಲ್ಪೆ ಪಡುಕೆರೆ ಬೀಚ್ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್.ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಉಡುಪಿ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್, ಸಿ.ಎಸ್.ಪಿ ಅಪರಾಧ ವಿಭಾಗದ ಪೊಲೀಸ್ ನಿರೀಕ್ಷಕ ರತ್ನಕುಮಾರ್, ಹೆಜಮಾಡಿ ಠಾಣೆಯ ಪೊಲೀಸ್ ನಿರೀಕ್ಷಕ ಮಂಜಪ್ಪ ಹಾಗೂ ಸಿಬ್ಬಂದಿಗಳು, ಭಟ್ಕಳ ಠಾಣೆ ಪೊಲೀಸ್ ನಿರೀಕ್ಷಕ ಕೃಷ್ಣಾನಂದ ನಾಯ್ಕ್ ಹಾಗೂ ಸಿಬ್ಬಂದಿಗಳು, ಮಲ್ಪೆ ಠಾಣೆಯ
ಸಿಬ್ಬಂದಿಗಳು, ಜಿಲ್ಲಾ ಹೋಮ್ಗಾರ್ಡ್ ಸಿಬ್ಬಂದಿಗಳು ಹಾಗೂ ಸ್ವಯಂ ಸೇವಕ ಸಂಘಗಳು, ಮಣಿಪಾಲ ಮಾಹೆಯ ವಿದ್ಯಾರ್ಥಿಗಳು, ಮುನಿಯಾಲು ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಮೆಡಿಕಲ್ ಸೈನ್ಸ್ ಕಾಲೇಜಿನ ಎನ್.ಎಸ್.ಎಸ್ ಘಟಕ ವಿದ್ಯಾರ್ಥಿಗಳು, ಮಣಿಪಾಲ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ವಿದ್ಯಾರ್ಥಿಗಳು, ಶಾಂತಿನಗರ ಧನ್ವಂತರಿ ಆಯುರ್ವೇದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು
ಹಾಗೂ ಮತ್ತಿತರರು ಭಾಗವಹಿಸಿದ್ದರು.
ಬೀಚ್ ಸ್ವಚ್ಛತೆಯ ನಂತರ ವಾಲಿಬಾಲ್, ಹಗ್ಗಜಗ್ಗಾಟ ಸ್ಪರ್ಧೆಯನ್ನು ನಡೆಸಲಾಯಿತು.
ಮಲ್ಪೆ ಠಾಣೆಯ ಪೊಲೀಸ್ ನಿರೀಕ್ಷಕ ಶಂಕರ್ ಎಸ್.ಕೆ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.