ಶಟಲ್ ಬ್ಯಾಡ್ಮಿಂಟನ್: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಕಲಿಕೆಯ ಜೊತೆಗೆ ವಿದ್ಯಾರ್ಥಿಗಳಲ್ಲಿ ಇರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ಅವಿರತವಾಗಿ ನಡೆಯುತ್ತಿರುವುದರಿಂದ ಕಾಲೇಜಿನ ವಿದ್ಯಾರ್ಥಿನಿಯರು ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಜರುಗಿದ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಗೆಲುವು ಸಾಧಿಸುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಧಾರಿಣಿ ಕೆ. ಎಸ್ ಮತ್ತು ಆತ್ಮಿಕಾ ಉಪಾಧ್ಯಾಯ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರು. ಇವರ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.