ಮೋಹಿನಿ ರೂಪದಲ್ಲಿ ಕಂಗೊಳಿಸಿದ ಪೊಡವಿಗೊಡೆಯ ಶ್ರೀಕೃಷ್ಣ ಪರಮಾತ್ಮ

ಉಡುಪಿ: ನವರಾತ್ರಿಯ ಪ್ರಯುಕ್ತ ಶ್ರೀಕೃಷ್ಣದೇವರಿಗೆ ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ‘ಮೋಹಿನಿ’ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.