ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಬೈಕ್ ರ‍್ಯಾಲಿಗೆ ಶಾಸಕ ರಘುಪತಿ ಭಟ್ ರಿಂದ ಚಾಲನೆ

ಉಡುಪಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ 2022 ಅಂಗವಾಗಿ ‘ಪ್ರವಾಸೋದ್ಯಮದ ಪುನರಾವಲೋಕನ’ ಎಂಬ ಸಂದೇಶದೊಂದಿಗೆ ಬೈಕ್ ರ‍್ಯಾಲಿಯನ್ನು ಆಯೋಜಿಸಲಾಯಿತು. ಮಂಗಳವಾರದಂದು ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಬಳಿ ಆಯೋಜಿಸಲಾದ ಬೈಕ್ ರ‍್ಯಾಲಿಗೆ ಶಾಸಕ ರಘುಪತಿ ಭಟ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಉದ್ಯಮಿ ಮನೋಹರ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.