ನೀಲಾವರ ಶರನ್ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಶ್ರೀ ಕ್ಷೇತ್ರ ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸೆ. 26 ರಿಂದ ಅ. 5ರವರೆಗೆ ನಡೆಯಲಿರುವ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಸೋಮವಾರ ದುರ್ಗಾ ಹೋಮ ನಡೆಯಿತು. ಸಂಜೆ ಶರನ್ನವರಾತ್ರಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.

ಉಡುಪಿ ಶಾಸಕ ರಘುಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನೀಲಾವರ ದೇವಳದ ಸಮೀಪದ ಸೀತಾ ನದಿಗೆ 5 ಕೋಟಿ ರೂ. ವೆಚ್ಚದಲ್ಲಿ ಸ್ಥಾನಘಟ್ಟ ನಿರ್ಮಿಸಲು ಈಗಾಗಲೇ ಕಾರ್ಯ ಆರಂಭವಾಗಿದೆ ಮತ್ತು ಭಕ್ತರ ಅನುಕೂಲಕ್ಕಾಗಿ ಇನ್ನಷ್ಟು ಅಭಿವೃದ್ಧಿ ಕಾರ್ಯ ನಡೆಯಲಿದೆ ಎಂದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎನ್. ರಘುರಾಮ ಮಧ್ಯಸ್ಥ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ನೀಲಾವರ ಗ್ರಾಪಂ ಅಧ್ಯಕ್ಷ ಮಹೇಂದ್ರ ಕುಮಾರ್, ಕನ್ನಾರು ಶ್ರೀ ದುರ್ಗಾ ಪರಮೇಶ್ವರೀ ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಭಟ್ ಆರೂರು, ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು‌.

ಈ ಸಂದರ್ಭ ಅರ್ಚಕರಾದ ಎನ್. ಚಂದ್ರಶೇಖರ ಅಡಿಗ, ಕೃಷ್ಣ ಅಡಿಗ, ರಾಘವೇಂದ್ರ ಅಡಿಗ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ಮಟಪಾಡಿ, ಅನೂಪ್ ಕುಮಾರ್ ಶೆಟ್ಟಿ, ಹೇಮಾ ವಿ. ಬಾಸ್ರಿ, ಕೆ. ತಮ್ಮಯ್ಯ ನಾಯ್ಕ್, ರುದ್ರ ದೇವಾಡಿಗ, ಜಯಂತಿ ಮೆಂಡನ್, ಅಭಿವೃದ್ಧಿ ಸಮಿತಿ, ಅರ್ಚಕರು, ಉಪಾದಿವಂತರು ಮತ್ತು ಸಿಬ್ಬಂದಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಸುಧೀರ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಉಮೇಶ್ ರಾವ್ ನಿರೂಪಿಸಿದರು. ನೀಲಾವರ ಮೇಳದಿಂದ ಯಕ್ಷಗಾನ ಕಾರ್ಯಕ್ರಮ ನಡೆಯಿತು.