ಬೆಂಗಳೂರು: ಸೂಪರ್ ಸ್ಟಾರ್, ತಲೈವ ರಜನಿಕಾಂತ್ ದರ್ಬಾರ್ ಗೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ವಿಲನ್ ಆಗಿ ಅಭಿನಯಿಸಲಿದ್ದಾರೆ. ಪೈಲ್ವಾನ್ ನಲ್ಲಿ ಕಿಚ್ಚ ಸುದೀಪ್ ಜತೆ ಕಾಣಿಸಿಕೊಂಡು ಅಬ್ಬರಿಸಿದ್ದ ಸುನೀಲ್ ಈಗ ವಿಲನ್ ಆಗಿದ್ದು, ಈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ ಖಳ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಸುನೀಲ್ ಶೆಟ್ಟಿ ಸದ್ಯ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷೆಯ ಪೈಲ್ವಾನ್ ಚಿತ್ರದಲ್ಲಿ ಸುನೀಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಮೊದಲ ಲುಕ್ ಕೂಡ ರಿವೀಲ್ ಆಗಿ ಉತ್ತಮ ಪ್ರತಿಕ್ರಿಯೆ ಪಡೆದು ಕೊಂಡಿದೆ.
ಪ್ರತೀಕ್ ತಂದೆಯ ಪಾತ್ರದಲ್ಲಿ ಸುನೀಲ್ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. 2004ರಲ್ಲಿ ರಿಲೀಸ್ ಆಗಿದ್ದ ಮೇ ಹೂಂ ನಾ ಚಿತ್ರದಲ್ಲಿ ಖಳ ನಟನಾಗಿ ಕಾಣಿಸಿಕೊಂಡಿದ್ದರು. ಆನಂತರ ಮತ್ತೆ ಖಳ ನಟನ ಪಾತ್ರಕ್ಕೆ ಬಣ್ಣ ಹಚ್ಚಿರಲಿಲ್ಲ. ಆದ್ರೀಗ “ದರ್ಬಾರ್” ಮೂಲಕ ಮತ್ತೆ ವಿಲನ್ ಆಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. “ದರ್ಬಾರ್” ಎ ಆರ್ ಮುರುಗದಾಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಚಿತ್ರದಲ್ಲಿ ಸೂಪರ್ ಸ್ಟಾರ್ ಖಾಕಿ ತೊಟ್ಟು ಖದರ್ ತೋರಿಸಲಿದ್ದಾರೆ. ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ತಲೈವ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ರಜಿನಿಕಾಂತ್ ಗೆ ಜೋಡಿಯಾಗಿ ನಯನತಾರ ಅಭಿನಯಿಸುತ್ತಿದ್ದಾರೆ.