ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 5ನೇ ವರ್ಷದ ದಾಂಡಿಯಾ ಮಹೋತ್ಸವ ಇಲ್ಲಿನ ಶೆರ್ವಾಣಿ ಮಂಟಪದ ಸಭಾಂಗಣದಲ್ಲಿ ಶನಿವಾರದಂದು ನಡೆಯಿತು. ಕನ್ನಡದ ಪ್ರಖ್ಯಾತ ಚಿತ್ರನಟ ರಮೇಶ ಅರವಿಂದ್ ಅವರು ದಾಂಡಿಯಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.
ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ನಗರಸಭಾ ಅಧ್ಯಕ್ಷೆ ಸುಮಿತಾ ನಾಯಕ್, ಕಡಿಯಾಳಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ.ರವಿರಾಜ್ ವಿ.ಆಚಾರ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾಗೇಶ್ ಹೆಗಡೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಪುರುಷೋತ್ತಮ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಗಣೇಶ್ ರಾವ್, ಖಜಾಂಚಿ ಕೆ.ರಾಘವೇಂದ್ರ ಕಿಣಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ನಿತ್ಯಾನಂದ ಕಾಮತ್, ಪ್ರಧಾನ ಕಾರ್ಯದರ್ಶಿ ಕುಂಜಿತ್ತಾಯ ಶ್ರೀನಿವಾಸ್ ಉಪಾಧ್ಯಾಯ, ಜಿಲ್ಲಾ ಮಹಿಳಾ ಬಿಜೆಪಿ ಅಧ್ಯಕ್ಷೆ ವೀಣಾ ಶೆಟ್ಟಿ, ಶಿಲ್ಪಾ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಮಹಿಳೆಯರು, ಯುವತಿಯರು ಮತ್ತು ಚಿಣ್ಣರು ಉತ್ಸಾಹದಿಂದ ದಾಂಡಿಯಾ ನೃತ್ಯ ಮಾಡಿ ಆನಂದಿಸಿದರು.