ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಇವರ ವತಿಯಿಂದ ಶಿವಮೊಗ್ಗದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಪ್ರಗತಿಪರ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿಗೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಪ್ರಗತಿಯತ್ತ ಸಾಗುತ್ತಿರುವ ಜಿಲ್ಲೆಯ ಅರ್ಹ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾ ಪಂಚಾಯತ್, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.