ಉಡುಪಿ:ಹಾಸನ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಮೂಡುಬಿದ್ರೆಯ ಕ್ರೀಯೆಟಿವ್ ಎಜುಕೇಷನ್ ಫೌಂಡೇಶನ್ ನ ಶೈಕ್ಷಣಿಕ ಸಹಭಾಗಿತ್ವದ ನಗರ ಹೊರ ವಲಯದ ಹೆಚ್.ಕೆ.ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಲಿಖಿತ್.ಬಿ.ವೈ ಕಂಚಿನ ಪದಕ ಪಡೆಯುವ ಮೂಲಕ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ಸುರೇಶ್, ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.