ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಾಧೀಶರಾಗಿ ನ್ಯಾಯಮೂರ್ತಿ ಡಾ. ಡಿ.ವೈ ಚಂದ್ರಚೂಡ್ ನೇಮಕ

ನವದೆಹಲಿ: ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಡಾ. ಡಿ.ವೈ ಚಂದ್ರಚೂಡ್ ಅವರನ್ನು ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿದ್ದಾರೆ.

ನವೆಂಬರ್ 9 ರಂದು ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಔಪಚಾರಿಕ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.