ಉಡುಪಿ: ಕರ್ನಾಟಕ ರಾಜ್ಯ ಶಾಮಿಯಾನ ಡೆಕೋರೇಷನ್, ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ದಿ ಸಂಘ ಗಂಗಾವತಿ, ಕೇಂದ್ರ ಕಛೇರಿ ವಿಜಯಪುರ, ಆಲ್ ಇಂಡಿಯಾ ಟೆಂಟ್ ಎಂಡ್ ಡೆಕೋರೇಷನ್ ವೆಲ್ ಫೇರ್ ಅಸೋಷಿಯನ್ ನವದೆಹಲಿ ಹಾಗೂ ಧ್ವನಿ ಬೆಳಕು ಸಂಯೋಜಕರ ಸಂಘಟನೆ ಉಡುಪಿ ಇದರ ಉಡುಪಿ ಜಿಲ್ಲಾ ದಶಮಾನೋತ್ಸವ ಉಡುಪಿ ವೈಭವ ಸಮಾರಂಭದಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ ಮತ್ತು ಅಮೃತಾ ಕೃಷ್ಣಮೂರ್ತಿ ದಂಪತಿಗಳನ್ನು ಗೌರವಿಸಿದರು.
ವೇದಿಕೆಯಲ್ಲಿ ರಾಜ್ಯಾಧ್ಯಕ್ಷ ಶಿವಕುಮಾರ್ ಹಿರೇಮಠ , ದಶಮಾನೋತ್ಸವ ಸಮಿತಿಯ ಅಧ್ಯಕ್ಷ ಶಿವರಾಜ್ ಮಲ್ಲಾರ್, ಜಿಲ್ಲಾಧ್ಯಕ್ಷ ರಾಮಕೃಷ್ಣ ಕುಂದರ್ ಪ್ರಧಾನ ಕಾರ್ಯದರ್ಶಿ ದಾಮೋದರ್ , ಜಿಲ್ಲಾ ಶಾಮಿಯಾನ ಅಧ್ಯಕ್ಷ ಉದಯಕುಮಾರ್, ವಿವಿಧ ರಾಜ್ಯ ಸಮಿತಿ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.