ಉಡುಪಿ, ಮೇ 27: 2019-20 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಹೊನ್ನಾಳ ಮತ್ತು ಕಾಪು ತಾಲ್ಲೂಕಿನ ಮಲ್ಲಾರುವಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲು ಸೂಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಂಗ್ಲ ಭಾಷಾ ಶಿಕ್ಷಕರು ( 2 ಹುದ್ದೆ – ಬಿ.ಎ, ಬಿ.ಎಡ್), ಹಿಂದಿ ಭಾಷಾ ಶಿಕ್ಷಕರು( 2 ಹುದ್ದೆ – ಬಿ.ಎ, ಬಿ.ಎಡ್), ಗಣಿತ ಶಿಕ್ಷಕರು ( 2 ಹುದ್ದೆ – ಬಿ.ಎಸ್ಸಿ, ಬಿ.ಎಡ್ ಅಥವಾ ಬಿಎಸ್ಸಿ, ಎಂಎಸ್ಸಿ) ಹುದ್ದೆಗಳಿಗೆ ನೇಂಕಾತಿ ನಡೆಯಲಿದೆ.
ಅತಿಥಿ ಶಿಕ್ಷಕರ ಸೇವೆಯು ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳುವವರೆಗೆ ಅಥವಾ 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಮಾತ್ರ ಸೀಮಿತವಾಗಿರುತ್ತದೆ. ನಿವೃತ್ತ ಶಿಕ್ಷಕರು ಸಹ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ.
ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಜೂನ್ 4 ರ ಒಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574596 ಅಥವಾ 0820-2574881 ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.