ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿ

ಉಡುಪಿ, ಮೇ 27: 2018-19 ನೇ ಸಾಲಿನ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೇಂದ್ರ, ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲಾ/ ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂತರರಾಷ್ಟ್ರ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ ಕಂಚಿನ ಪದಕ ವಿಜೇತರಾದವರು ಹಾಗೂ ವಿಕಲಚೇತನ ಕ್ರೀಡಾಪಟುಗಳು ಕೂಡಾ ಈ ಯೋಜನೆಗೆ ಅರ್ಹರಾಗಿರುತ್ತಾರೆ.

ಅರ್ಹ ಅಭ್ಯರ್ಥಿಗಳು ಕಚೇರಿಯವೆಬ್‍ಸೈಟ್  http://serviceonline.gov.in/Karnataka  ಮೂಲಕ ಅರ್ಜಿಯನ್ನು ಜೂನ್ 30 ರ ಒಳಗೆ ಸಲ್ಲಿಸಬೇಕು. ಆನ್‍ಲೈನ್ ಮೂಲಕ ಸಲ್ಲಿಸಿದ ಪ್ರಸ್ತಾವನೆಗಳ ಯಥಾಪ್ರತಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಈ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ (ದೂರವಾಣಿ ಸಂಖ್ಯೆ: 0820-2521324, 9480886467)  ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.