ಮಂಗಳೂರು: ಸಾಮಾಜಿಕ ಕಾರ್ಯಕರ್ತೆ ಮತ್ತು ಕಾಂಗ್ರೆಸ್ ಪಕ್ಷದ ಸಂಯೋಜಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯವಾಗಿ ಬರೆದು ಅವರ ಘನತೆಗೆ ಧಕ್ಕೆ ತಂದ ವ್ಯಕ್ತಿಯ ಬಂಧನಕ್ಕೆ ಎರಡು ತಂಡ ರಚಿಸಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದ ಸಂದರ್ಭದಲ್ಲಿ ಪ್ರತಿಭಾ ಅವರ ವೀಡಿಯೋ ಚಿತ್ರಗಳನ್ನು ಸಂಕಲನ ಮಾಡಿ ಅದನ್ನು ಅಸಭ್ಯ ರೀತಿಯಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಬಗ್ಗೆ ದೂರು ನೀಡಿದ್ದು, ಮಹಿಳೆಯ ಅಸಭ್ಯ ಪ್ರಾತಿನಿಧ್ಯಕ್ಕಾಗಿ ಶ್ಯಾಮಸುಂದರ್ ಭಟ್ ಹೊಸಮಲೆ ಎನ್ನುವವರ ವಿರುದ್ದ ಮಹಿಳಾ ಠಾಣೆಯಲ್ಲಿ ಮಾನಹಾನಿ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಆದಷ್ಟು ಶೀಘ್ರವೇ ಬಂಧಿಸಲಾಗುವುದು. ಇದಕ್ಕೆ ತಂಡಗಳನ್ನು ರಚಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಅವರು ತಿಳಿಸಿದರು.