ಬೆಳಕಿನ ಹಬ್ಬದಂದು ಕತ್ತಲೆಯಲ್ಲಿದ್ದ ಮನೆಗಳಿಗೆ ಆಸರೆಯಾದ ಶಾಸಕ ರಘುಪತಿ ಭಟ್

ಉಡುಪಿ: ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದ ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಳಕಿನ ಹಬ್ಬ ದೀಪಾವಳಿಯ ದಿನದಂದು ಉಡುಪಿ ನಗರದಲ್ಲಿ ಒಟ್ಟು 7 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿದ್ದು, ಸರಳಬೆಟ್ಟು ವಾರ್ಡಿನ ಕೊರಗರ ಕಾಲೋನಿಯ 3 ಮನೆಗಳ ವಿದ್ಯುತ್ ಸಂಪರ್ಕಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಶಶಿಕಿರಣ್ ಉಮಾಕಾಂತ್, ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ. ರವಿರಾಜ್ ಆಚಾರ್ಯ, ಆಸರೆ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಪ. ವಸಂತ್ ಭಟ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ, ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯೆ ಶಶಿಕಲಾ ಭಟ್, ಸ್ಥಳೀಯ ನಗರಸಭಾ ಸದಸ್ಯೆ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.