ಉಪ್ಪೂರು: 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ವಿ ಸುನಿಲ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿಗಳು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಸಮಸ್ತ ಕನ್ನಡಿಗರ ಒಕ್ಕೊರಳ ಹಾಡಿಗೆ ಸಂಸ್ಥೆಯ ವತಿಯಿಂದ ಧ್ವನಿಗೂಡಿಸಿ ಕನ್ನಡಾಂಬೆಗೆ ನಮನ ಸಲ್ಲಿಸಲಾಯಿತು.