ಬ್ರಹ್ಮಾವರ: ವಿದ್ಯಾಲಕ್ಷ್ಮಿ ಸಮೂಹ ಸಂಸ್ಥೆಯಲ್ಲಿ ಕೋಟಿ ಕಂಠ ಗಾಯನ

ಬ್ರಹ್ಮಾವರ: 67 ನೇ ಕರ್ನಾಟಕ ರಜ್ಯೋತ್ಸವದ ಪ್ರಯುಕ್ತ ನನ್ನ ನಾಡು ನನ್ನ ಹಾಡು ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾದ ಕೋಟಿ ಕಂಠ ಗಾಯನದಲ್ಲಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡರು. ವಿದ್ಯಾರ್ಥಿಗಳಿಗೆ ನಾಡು ನುಡಿ ಸಂಸ್ಕೃತಿ ಮತ್ತು ಪರಂಪರೆಯ ಕುರಿತು ಅರಿವು ಮೂಡಿಸಿ ಸಂಕಲ್ಪ ವಿಧಿ ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಹಾಗೂ ನಿರ್ದೇಶಕಿ ಶ್ರೀಮತಿ ಮಮತಾ ಮತ್ತು ಪ್ರಾಂಶುಪಾಲೆ ಶ್ರೀಮತಿ ಸೀಮಾ ಭಟ್ ಉಪಸ್ಥಿತರಿದ್ದರು.