ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ನೀರು ಸರಬರಾಜು ಸ್ಥಗಿತ

ಉಡುಪಿ: ನಗರಸಭಾ ವ್ಯಾಪ್ತಿಯ ಬಜೆ ನೀರು ಸರಬರಾಜು ರೇಚಕ ಸ್ಥಾವರದದಲ್ಲಿ ತಾಂತ್ರಿಕ ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸಲಾಗುವುದರಿಂದ ಅಕ್ಟೋಬರ್ 31 ರಂದು ಹಾಗೂ ನವೆಂಬರ್ 01 ರಂದು ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳಲ್ಲಿ ಕುಡಿಯುವ ನೀರು ಸರಬರಾಜಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.