ಹಿರಿಯ ಕಲಾವಿದೆ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ

ಬೆಂಗಳೂರು: ಹಿರಿತೆರೆ ಮತ್ತು ಕಿರುತೆರೆಯ ಹಿರಿಯ ಕಲಾವಿದೆ ವಿನಯ್ ಪ್ರಸಾದ್ ಮನೆಯಲ್ಲಿ ಕಳ್ಳತನವಾಗಿರುವುದಾಗಿ ವರದಿಯಾಗಿದೆ. ವಿನಯ್ ಪ್ರಸಾದ್ ಮತ್ತು ಅವರ ಪರಿವಾರದವರು ಮನೆಯಲ್ಲಿಲ್ಲದ ವೇಳೆಯಲ್ಲಿ ಮನೆಗೆ ನುಗ್ಗಿದ ಕಳ್ಳರುಮಲಗುವ ಕೋಣೆಯಲ್ಲಿಟ್ಟಿದ್ದ 7 ಸಾವಿರ ರೂಪಾಯಿನಗದು ಎಗರಿಸಿದ್ದಾರೆ. ಇತರ ವಸ್ತುಗಳು ಕಳವಾಗಿರುವ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದ್ದು, ಕಳ್ಳತನಕ್ಕೆ ಸಂಬಂಧಿಸಿ ನಟಿ ವಿನಯ ಪ್ರಸಾದ್ ರವರು ನಂದಿನಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಉಡುಪಿಗೆ ತೆರಳಿದ್ದ ವೇಳೆ ಕಳ್ಳತನ

ನಟಿ ವಿನಯ್ ಪ್ರಸಾದ್ ಮತ್ತು ಪತಿ ಜ್ಯೋತಿ ಪ್ರಕಾಶ್ ರವರು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್ 22 ರಂದು ತಮ್ಮ ಸ್ವಂತ ಊರಾದ ಉಡುಪಿಗೆ ತೆರಳಿದ್ದರು. ಅಕ್ಟೋಬರ್ 26 ರಂದು ಬೆಂಗಳೂರಿನ ತಮ್ಮ ಮನೆಗೆ ವಾಪಸ್ ಆಗಿ ನೋಡಿದಾಗ ಮನೆಯಲ್ಲಿ ಕಳ್ಳತನವಾಗಿರುವುದು ತಿಳಿದು ಬಂದಿದೆ. ಕಳ್ಳರು ಮನೆಯ ಬಾಗಿಲಿನ ಲಾಕ್ ಮುರಿದು ಒಳಗೆ ಪ್ರವೇಶಿದ್ದಾರೆ. ಸುತ್ತಲಿನವರು ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಸಮಯದಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಮನೆಯಲ್ಲಿ ಕಳವಾಗಿರುವುದು ಗಮನಕ್ಕೆ ಬಂದ ಕೂಡಲೆ ಪ್ರಸಾದ್ ದಂಪತಿಗಳು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಕಳ್ಳರನ್ನು ಹಿಡಿಯಲು ಬಲೆ ಬೀಸಿದ್ದಾರೆ.