ನಾವುಂದ: ಅಕ್ಟೋಬರ್ 30ರಂದು ಭಂಡಾರ್ಕಾರ್ಸ್ ಕಾಲೇಜಿನ ಎನ್ ಎಸ್ ಎಸ್ ಘಟಕ, ಮಂಗಳೂರಿನ ಎನೆಪೋಯ ದಂತ ವಿಜ್ಞಾನ ಕಾಲೇಜಿನ ಎನ್ ಎಸ್ ಎಸ್ ಘಟಕ, ನಾವುಂದ ಗ್ರಾಮ ಪಂಚಾಯತ್ ಹಾಗೂ ಲಯನ್ಸ್ ಕ್ಲಬ್ ನಾವುಂದ ಇವರ ಸಹಯೋಗದಲ್ಲಿ ಫಿಟ್ ಇಂಡಿಯಾ ಫ್ರೀಡಂ ರನ್ 3.0 ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮವು ನಾವುಂದ ಗ್ರಾಮ ಪಂಚಾಯತ್ ಪರಿಸರದಲ್ಲಿ ನಡೆಯಿತು.
ಸುಮಾರು 200ಕ್ಕೂ ಮಿಕ್ಕಿ ಎನ್ ಎಸ್ ಎಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೀಚ್ ಪರಿಸರವನ್ನು ಸ್ವಚ್ಚಗೊಳಿಸಿದರು.
ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ನರಸಿಂಹ ದೇವಾಡಿಗ, ಕ್ಲಬ್ ನ ಸ್ಥಾಪಕ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಲಯನ್ಸ್ ಕ್ಲಬ್ ನ ಎಲ್ಲಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು, ಎನೆಪೋಯ ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿ ಡಾ. ಇಮ್ರಾನ್, ಭಂಡಾರ್ಕರ್ಸ್ ಕಾಲೇಜಿನ ಎನ್ ಎಸ್ ಎಸ್ ಯೋಜಾನಾಧಿಕಾರಿ ರಾಮಚಂದ್ರ ಆಚಾರ್ ಹಾಗೂ ಅರುಣ್ ಎ ಎಸ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕಾರಾಚಾರಿ ಹಾಗೂ ಉಪನ್ಯಾಸಕರಾದ ಅಣ್ಣಪ್ಪ ಪೂಜಾರಿ, ಶರಣ್ ಹಾಗೂ ಸಂತೋಷ್ ಉಪಸ್ಥಿತರಿದ್ದರು.
ಶಶಿಧರ ಶೆಟ್ಟಿ ಸ್ವಾಗತಿಸಿದರು, ಕಾರ್ಯದರ್ಶಿ ದಿನೇಶ್ ಆಚಾರ್ ವಂದಿಸಿದರು.












