ಉಡುಪಿ: ಶ್ರೀಕೃಷ್ಣಮಠದಲ್ಲಿ ತೆಪ್ಪೋತ್ಸವ ಸಹಿತ ಲಕ್ಷದೀಪೋತ್ಸವ ನೆರವೇರಿತು. ಅಷ್ಟಮಠಾಧೀಶರು ಲಕ್ಷದೀಪೋತ್ಸವದ ಪ್ರಯುಕ್ತ ಅಟ್ಟಣಿಗೆಗಳಲ್ಲಿ ತಿಪಿಲೆಗಳನ್ನು ಜೋಡಿಸಿದರು.
ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಕ್ಷೀರಾಬ್ದಿ ಪೂಜೆ ನೆರವೇರಿಸಿ ಲಕ್ಷದೀಪೋತ್ಸವದಲ್ಲಿ ಭಾಗವಹಿಸಿದರು.
ಕುಮಾರಿ ಹರಿಣೀ ಚೆನ್ನೈ ಇವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.





















