ಗೃಹರಕ್ಷಕದಳ ಇಲಾಖೆಯಲ್ಲಿ ಗೃಹರಕ್ಷಕರ ಹುದ್ದೆ ಖಾಲಿ

ಉಡುಪಿ: ಉಡುಪಿ ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಗೃಹರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿದ 19 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೈಂದೂರು ಘಟಕದ ರಾಘವೇಂದ್ರ ಮೊ.ನಂ: 9449469838, ಕುಂದಾಪುರ ಘಟಕದ ಭಾಸ್ಕರ್ ಮೊ.ನಂ: 9242126368, ಬ್ರಹ್ಮಾವರ ಘಟಕದ ಸ್ಟೀವನ್ ಪ್ರಕಾಶ್ ಮೊ.ನಂ: 9731897356, ಕಾರ್ಕಳ ಘಟಕದ ಪ್ರಭಾಕರ ಸುವರ್ಣ ಮೊ.ನಂ: 9632002170, ಕಾಪು ಘಟಕದ ಲಕ್ಷ್ಮಿ ನಾರಾಯಣ ರಾವ್ ಮೊ.ನಂ: 9743491084, ಪಡುಬಿದ್ರೆ ಘಟಕದ ನವೀನ್ ಮೊ.ನಂ: 9880343236, ಮಣಿಪಾಲ ಘಟಕದ ಶೇಖರ್ ಮೊ.ನಂ: 6360895883 ಹಾಗೂ ಉಡುಪಿ ಘಟಕದ ಕುಮಾರ್
ಮೊ.ನಂ: 8971682721 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.