ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಇದರ ಆಶ್ರಯದಲ್ಲಿ ವಿವಿಧ ಮುಂಚೂಣಿ ಘಟಕಗಳಾದ ಕಾಪು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ಸಮಿತಿ,
ಕಾಪು ಬ್ಲಾಕ್ ಕಾಂಗ್ರೆಸ್ ಇಂಟಕ್ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಆರ್.ಜಿ.ಪಿ.ಆರ್.ಎಸ್ ಸಮಿತಿ, ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನ.10 ರಂದು ಸುರಭಿ ಹಾಲ್, ಕೊಟ್ನಕಟ್ಟೆಯಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.
ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ-ಕಿರಿಯ ನಾಯಕರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ವಿವಿಧ ಸ್ತರದ ಸ್ಥಳೀಯಾಡಳಿತ ಸಂಸ್ಥೆಗಳ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್.ಎಸ್.ಯು.ಐ., ಅಲ್ಪಸಂಖ್ಯಾತ ಘಟಕ, ಎಸ್.ಸಿ./ ಎಸ್.ಟಿ ಘಟಕ, ಹಿಂದುಳಿದ ವರ್ಗಗಳ ಘಟಕ,ಕಿಸಾನ್ ಘಟಕ, ಎಲ್ಲ ಗ್ರಾಮೀಣ ಕಾಂಗ್ರೆಸ್ ಸಮಿತಿ ಮತ್ತು ಬೂತ್ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ಕಚೇರಿ ಪ್ರಕಟಣೆ ತಿಳಿಸಿದೆ.












