ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ನ.8 ರಂದು ವಿದ್ಯಾರ್ಥಿಗಳಿಗೆ “ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ” ಹಾಗೂ “ನಮಗೂ ಹಕ್ಕಿದೆ @75” ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ವಕೀಲ ಭವಿಷ್ ಕುಂದರ್ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು, ಮಾದಕ ವಸ್ತು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ ಇವರು ವಹಿಸಿದ್ದರು.
ವಾಣಿಜ್ಯಶಾಸ್ತ್ರ ಉಪನ್ಯಾಸಕ ಸುಶಾಂತ್ ನಾಯಕ್ ಸ್ವಾಗತಿಸಿದರು, ಸಂಖ್ಯಾಶಾಸ್ತ್ರ ಉಪನ್ಯಾಸಕಿ ಮೇಘನಾ ಹೆಬ್ಬಾರ್ ವಂದಿಸಿದರು, ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ನಿರೂಪಿಸಿದರು.