ಕಾರ್ಕಳ: ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಬೆಂಗಳೂರು ಇದರ ಕಾರ್ಕಳ ತಾಲೂಕು ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಕಳ ಬೈಪಾಸ್ ರಸ್ತೆ ಶ್ರೀ ಭವಾನಿ ಮಿಲ್ ಬಳಿ ಛತ್ರಪತಿ ಶಿವಾಜಿ ಮಹಾರಾಜರ 12 ಅಡಿ ಎತ್ತರದ ಪುತ್ಥಳಿಯುಳ್ಳ ವೃತ್ತ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಶನಿವಾರದಂದು ನಡೆಯಿತು.
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮದ ಅಂಗವಾಗಿ ಬೈಕ್ ಜಾಥಾ ನಡೆಯಿತು.
ಕೃಪೆ: ವಿ. ಸುನಿಲ್ ಕುಮಾರ್/ಟ್ವಿಟರ್