ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವಿಚಾರಗೋಷ್ಠಿ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ “ಕನ್ನಡ ನಾಡು-ನುಡಿ-ಸಂಸ್ಕೃತಿ” ವಿಷಯದ ಕುರಿತು ವಿದ್ಯಾರ್ಥಿ ವಿಚಾರಗೋಷ್ಠಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ್ ವಹಿಸಿದ್ದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜು ಬೈಂದೂರಿನ ಅತಿಥಿ ಉಪನ್ಯಾಸಕ ಎಸ್. ಮಣಿಕಂಠ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಕನ್ನಡ ನಾಡು-ನುಡಿಯ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಕನ್ನಡ ನೆಲ, ಜಲ, ಸಂಸ್ಕೃತಿ, ಸಂಪ್ರದಾಯವನ್ನು ಗೌರವಿಸುವಂತೆ ಕರೆ ನೀಡಿದರು.

ಸಮಾರಂಭದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕಮಂಜು ಕಾಳಾವರ, ಕಾಲೇಜಿನ ಉಪಪ್ರಾಂಶುಪಾಲ, ಬೋಧಕ- ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ರಕ್ಷಿತಾ, ವರ್ಷಾ ರವಿಶಂಕರ್, ಧನ್ಯ, ಭೂಷಣ್, ಶಿಫಾಲಿ, ದರ್ಶನ್ ಹಾಗೂ ವಿಘ್ನೇಶ್ ವಿಚಾರಗೋಷ್ಠಿಯಲ್ಲಿ ವಿಚಾರವನ್ನು ಮಂಡಿಸಿದರು. ಕನ್ನಡ ಉಪನ್ಯಾಸಕ ಉದಯ್ ನಾಯ್ಕ್ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿಗಳಾದ ಕೌಶಲ್ ನಿರೂಪಿಸಿ, ಶ್ರೀನಿಧಿ ವಂದಿಸಿದರು.