ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗ ಉದ್ಘಾಟನೆ

ಮಣಿಪಾಲ:   ನ.14ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವನ್ನು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.

ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಸ್ತುವಾರಿ ಭಾಗೀರಥಿ ಮುರುಳಿಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ರಾಷ್ಟ್ರೀಯ ಮಹಿಳಾ ಆಯೋಗದ ನಿಕಟಪೂರ್ವ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗದ ಅಪೇಕ್ಷಿತರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಮೀಳಾ ಹರೀಶ್ ಕಾರ್ಯಕ್ರಮ ನಿರೂಪಿಸಿ, ರಶ್ಮಿತಾ ಬಾಲಕೃಷ್ಣ ಶೆಟ್ಟಿ ವಂದಿಸಿದರು.