ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ರಮೇಶ್ ಕಾಂಚನ್ ಅರ್ಜಿ ಸಲ್ಲಿಕೆ

ಉಡುಪಿ:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸೂಚನೆಯಂತೆ ಕಾಂಗ್ರೆಸ್ ಪಕ್ಷದಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಅರ್ಜಿ ಸಲ್ಲಿಬೇಕೆಂದು ಮಾಹಿತಿ ನೀಡಿದ ಪ್ರಕಾರ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿ ಸ್ಪರ್ಧಿಸುವ ಆಕಾಂಕ್ಷೆ ಇದ್ದು ಅದರಂತೆ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಹಿತೈಷಿಗಳ ಸಮ್ಮತಿ ಪಡೆದು, ಸೋಮವಾರದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ   ಹಾಗೂ  ಉಡುಪಿ ನಗರಸಭೆಯ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್  ಅರ್ಜಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕ ಮುರಳಿ ಶೆಟ್ಟಿ, ಮಾಜಿ ಚಿಕ್ಕಮಂಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ವಿಜಯ್ ಕುಮಾರ್, ಮಾಜಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ಅಮೀನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಗಣೇಶ್ ದೇವಾಡಿಗ, ಶರತ್ ಶೆಟ್ಟಿ, ಉಡುಪಿ ಕಾಂಗ್ರೆಸ್ ಮುಖಂಡ ಪ್ರಿತೇಶ್ ಪೂಜಾರಿ ಚಿಟ್ಪಾಡಿ, ಬ್ರಹ್ಮಾವರ ಬ್ಲಾಕ್ ಚಾಂತಾರು ಗ್ರಾಮ ಪಂಚಾಯತ್ ಸದಸ್ಯ ಸಂದೇಶ್ ಶೆಟ್ಟಿ, ಕಾಂಗ್ರೆಸ್ ಮುಖಂಡ ರಕ್ಷಿತ್, ರಿತೇಶ್ ಸಾಲ್ಯಾನ್, ಸಂಜಯ್ ಆಚಾರ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು