ನವೆಂಬರ್ 19 ರಂದು ಇರ್ವತ್ತೂರಿನಲ್ಲಿ ಕಾರ್ಕಳ ತಹಶೀಲ್ದಾರ್ ಗ್ರಾಮವಾಸ್ತವ್ಯ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ತಾಲೂಕು ತಹಶೀಲ್ದಾರರು ನವೆಂಬರ್ 19 ರಂದು ಇರ್ವತ್ತೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದು, ಇರ್ವತ್ತೂರು ಗ್ರಾಮದ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಕಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.