ಉಡುಪಿ: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, “ತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.