ಉಡುಪಿ: ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ, ಸಹಕಾರ ಇಲಾಖೆ ಆಶ್ರಯದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಅಜ್ಜರಕಾಡಿನ ಪುರಭವನದ ಮಿನಿ ಸಭಾಂಗಣದಲ್ಲಿ ನಾಳೆ ಅಪರಾಹ್ನ 3 ಗಂಟೆಗೆ ‘ಯುವಜನ, ಮಹಿಳೆ, ಅಬಲ ವರ್ಗ ಮತ್ತು ಆರೋಗ್ಯಕ್ಕಾಗಿ ಸಹಕಾರ ಸಂಸ್ಥೆ’ ದಿನದ ಆಚರಣೆ ನಡೆಯಲಿದೆ.
ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎನ್. ಕಾರ್ಯಕ್ರಮ ಉದ್ಘಾಟಿಸಲಿದ್ದು, ಟಿಎಪಿಸಿಎಂಎಸ್ ಅಧ್ಯಕ್ಷ ಬಿ. ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಲಕ್ಷ್ಮೀನಾರಾಯಣ ಜಿ.ಎನ್., ನಗರಸಭೆ ಪೌರಾಯುಕ್ತ ಡಾ. ಉದಯ ಶೆಟ್ಟಿ ಉಪಸ್ಥಿತರಿರಲಿದ್ದಾರೆ.
ಅಜ್ಜರಕಾಡು ಸಹಕಾರಿ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.