ಉಡುಪಿ: ಉಡುಪಿ ನಗರಸಭೆಯ ಸಾಮಾನ್ಯ ಸಭೆಯು ನವೆಂಬರ್ 28 ರಂದು ಬೆಳಗ್ಗೆ 10.30 ಕ್ಕೆ ಕಚೇರಿಯ
ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನವೆಂಬರ್ 25 ರಂದು ಕುಂದಾಪುರ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಜನ
ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು. ಗ್ರಾಹಕರು ದೂರವಾಣಿ ಸಂಖ್ಯೆ: 08254-230490 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.