ಕಾರ್ಕಳ: ನವೆಂಬರ್ 26 ರಂದು ಕೋಟಿ ಚೆನ್ನಯ್ಯ ಥೀಂ ಪಾರ್ಕಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಕೋಟಿ ಚೆನ್ನಯ ಅಭಿವೃದ್ಧಿ ಸಮಿತಿ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದೊಂದಿಗೆ ಕಾರ್ಕಳ ಕೋಟಿ ಚೆನ್ನಯ್ಯ ಥೀಂ ಪಾರ್ಕ್ನಲ್ಲಿ ನಡೆಯಲಿರುವ ಮಾಸಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ನವೆಂಬರ್ 26 ರಂದು ಸಂಜೆ 5.30 ಕ್ಕೆ ನಡೆಯಲಿದೆ.

ಮೊದಲ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಂದು ಸಂಜೆ 6 ರಿಂದ ರಾತ್ರಿ 9 ರವರೆಗೆ ರಾಮ ನಿರ್ಯಾಣ ಯಕ್ಷಗಾನ ತಾಳಮದ್ದಳೆಯನ್ನು ಏರ್ಪಡಿಸಲಾಗಿದೆ. ಪ್ರತಿ ತಿಂಗಳು ಥೀಂ ಪಾರ್ಕ್ನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.