ಉಡುಪಿ: ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಡಾ. ಸಂಜಯ್ ಜೈಸ್ವಾಲ್ ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ಹೋಟೆಲ್ ವ್ಯಾಲಿವ್ಯೂನಲ್ಲಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಮಾಧ್ಯಮ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಹಾಗೂ ವಿಹಿಂಪ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್ ಉಪಸ್ಥಿತರಿದ್ದರು.