ಮಂಗಳೂರು: ಯಕ್ಷಗಾನ ಕಲೆಯ ಮೇರು ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅಂತ್ಯ ಸಂಸ್ಕಾರ ಡಿ.1 ರಂದು (ನಾಳೆ) ನೆರವೇರಲಿದೆ. ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರಿಗೆ ವೀಕ್ಷಣೆಗೆ ಇಡಲಾಗುವುದು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಮೇರು ಕಲಾವಿದನ ಅಗಲಿಕೆಗೆ ಗಣ್ಯರು, ಯಕ್ಷಗಾನ ಕಲಾವಿದರು ಮತ್ತು ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.