ಕುಂದಾಪುರ: ಕೊಲ್ಲೂರು 33 ಕೆ.ವಿ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಮತ್ತು 110/33/11 ಕೆ.ವಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕಂಬದಕೋಣೆ ಹಾಗೂ ಮರವಂತೆ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮರವಂತೆ, ನಾವುಂದ, ಯಡೇರಿ, ಕಂಬದಕೋಣೆ, ಹೆರಂಜಾಲು, ಕಾಲ್ತೋಡು ಕಿರಿಮಂಜೇಶ್ವರ, ಬವಳಾಡಿ ಮತ್ತು ಕೆರ್ಗಾಲ್ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.